ಪುಣೆಯಲ್ಲಿ ಭಾರೀ ಮಳೆ: ಗೋಡೆ ಕುಸಿದು 14 ಮಂದಿ ಮೃತ್ಯು

Update: 2019-06-29 03:58 GMT
ಫೋಟೊ: ಎಎನ್ಐ

ಪುಣೆ: ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಲ್ಲಿನ ಹೌಸಿಂಗ್ ಸೊಸೈಟಿ ವಸತಿ ಸಂಕೀರ್ಣವೊಂದು ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ.

ಕೊಳಗೇರಿಯಲ್ಲಿ ಕಾರ್ಮಿಕರು ಹೆಚ್ಚಾಗಿ ವಾಸವಿದ್ದ ಸಂಕೀರ್ಣದಲ್ಲಿ ಈ ದುರಂತ ಸಂಭವಿಸಿದೆ ಎಂದು ಆರಂಭಿಕ ವರದಿಗಳು ತಿಳಿಸಿವೆ. ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ ಸ್ಥಳಕ್ಕೆ ಧಾವಿಸಿದೆ.

ನಿರ್ಮಾಣ ಹಂತದ ಸ್ಥಳದಲ್ಲಿ ಕಾರ್ಮಿಕರ ಶಿಬಿರ ನಿರ್ಮಿಸಲಾಗಿದ್ದು, ಇಲ್ಲಿ ದುರಂತ ನಡೆದಿದೆ ಎಂದು ಜಿಲ್ಲಾಧಿಕಾರಿ ನವಲ್ ಕಿಶೋರ್ ರಾಮ್ ಹೇಳಿದ್ದಾರೆ.

ಮೇಲ್ನೋಟಕ್ಕೆ ಕಂಡುಬಂದಂತೆ ಭಾರೀ ಮಳೆಯಿಂದಾಗಿ ಗೋಡೆ ಕುಸಿದಿದೆ. ನಿರ್ಮಾಣ ಹಂತದ ಗೋಡೆ ಪಕ್ಕವೇ ಕಾರ್ಮಿಕರ ಶಿಬಿರಗಳನ್ನು ಕಲ್ಪಿಸಿರುವುದು ಬಿಲ್ಡರ್‌ನ ಲೋಪ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಪುಣೆಯಲ್ಲಿ 73.1 ಮಿಲಿಮೀಟರ್ ಮಳೆಯಾಗಿದೆ. ಇದು 2010ರ ಬಳಿಕ ಜೂನ್‌ನಲ್ಲಿ ಬಿದ್ದ ಅತ್ಯಧಿಕ ಮಳೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News