14 ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2019-06-29 12:56 GMT

ಬೆಂಗಳೂರು, ಜೂ.29: ರಾಜ್ಯ ಸರಕಾರವು 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಜನಸ್ಪಂದನ)ಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ-ಪರಮೇಶ್ ಪಾಂಡೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ಮಂಜುಳಾರಿಗೆ ಡಿಪಿಎಆರ್(ಆಡಳಿತ ಸುಧಾರಣೆ, ತರಬೇತಿ ಹಾಗೂ ರಾಜಕೀಯ ಪಿಂಚಣಿ)ಯ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ.ಸಂದೀಪ್ ದವೆ ಅವರನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯನ್ನಾಗಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಯಾಗಿರುವ ಡಾ.ರಾಜ್‌ಕುಮಾರ್ ಖತ್ರಿಯವರಿಗೆ ಕಂದಾಯ ಇಲಾಖೆಯ ಪ್ರಾಕೃತಿಕ ವಿಕೋಪ ನಿರ್ವಹಣೆ, ಭೂಮಿ ಮತ್ತು ಯುಪಿಓಆರ್ ವಿಭಾಗದ ಅಪರ ಮುಖ್ಯ ಕಾರ್ಯದರ್ಶಿಯಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಹರ್ಷ್ ಗುಪ್ತಾರನ್ನು ವಸತಿ ಇಲಾಖೆಯ ಕಾರ್ಯದರ್ಶಿಯನ್ನಾಗಿ, ಪಿ.ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯನ್ನಾಗಿ ಹಾಗೂ ಪಿ.ಹೇಮಲತಾ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು, ಹಿರಿಯ ನಾಗರಿಕರ ಇಲಾಖೆಯ ಕಾರ್ಯದರ್ಶಿ ಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಆರ್ಥಿಕ ಇಲಾಖೆ(ಬಜೆಟ್ ಮತ್ತು ಸಂಪನ್ಮೂಲ)ಯ ಸರಕಾರದ ಕಾರ್ಯದರ್ಶಿ ಯನ್ನಾಗಿ ವರ್ಗಾವಣೆಯಾಗಿರುವ ಡಾ.ಏಕರೂಪ್ ಕೌರ್ ಅವರನ್ನು ರಾಜ್ಯ ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿ ಆದೇಶ ಹೊರಡಿಸಲಾಗಿದೆ.

ವಸತಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಡಾ.ಜೆ.ರವಿಶಂಕರ್ ಅವರನ್ನು ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ. ಡಾ.ಪಿ.ಸಿ.ಜಾಫರ್ ಅವರನ್ನು ಆರ್ಥಿಕ ಇಲಾಖೆ(ವೆಚ್ಚ)ಯ ಸರಕಾರದ ಕಾರ್ಯದರ್ಶಿಯನ್ನಾಗಿ ವರ್ಗಾಯಿಸಿದ್ದು, ರಾಜ್ಯ ಪಾನೀಯ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಸಲ್ಮಾ ಕೆ.ಫಹೀಮ್ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ(ಕೆಎಸ್‌ಎಫ್‌ಸಿಎಸ್ಸಿ)ದ ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಸ್.ಝಿಯಾವುಲ್ಲಾ ರನ್ನು ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆ(ಎಂಎಸ್‌ಎಂಇ) ಇಲಾಖೆಯ ನಿರ್ದೇಶಕರನ್ನಾಗಿ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿದ್ದ ಆರ್.ವಿನೋತ್ ಪ್ರಿಯಾರನ್ನು ಕಾರ್ಮಿಕ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಆರ್.ಗಿರೀಶ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News