ರೌಡಿಗಳ ಪರೇಡ್: ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ

Update: 2019-06-29 14:34 GMT

ಬೆಂಗಳೂರು, ಜೂ.29: ಕೊಲೆ, ಕೊಲೆಯತ್ನ, ದರೋಡೆ ಹಾಗೂ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಗಳ ಪರೇಡ್ ಅನ್ನು ಶನಿವಾರ ನಡೆಸಲಾಯಿತು.

ನಗರದ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಸಫೆಟ್ ನೇತೃತ್ವದಲ್ಲಿ 142ಕ್ಕೂ ಅಧಿಕ ರೌಡಿಶೀಟರ್‌ಗಳ ಪರೇಡ್ ನಡೆಸಿ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು.

ಜಯನಗರ ಉಪ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಠಾಣೆಗಳ ವ್ಯಾಪ್ತಿಯಲ್ಲಿ 142 ರೌಡಿಗಳ ಪರೇಡ್‌ನಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ, ಅವರ ವಿರುದ್ಧ ಗೂಂಡಾ ಕಾಯ್ದೆ ಜಾರಿ ಮಾಡಲಾಗುವುದೆಂದು ರೋಹಿಣಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News