ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2019-06-29 20:35 IST
ಮಂಗಳೂರು, ಜೂ.29: ಹಲವು ಪ್ರಕರಣಗಳಲ್ಲಿ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರಿಸ್ (26) ಬಂಧಿತ ಆರೋಪಿ.
ಆರೋಪಿಯ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಈತ ಸುಮಾರು 1ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ. ಈತನ ಮೇಲೆ ಬರ್ಕೆ, ಸುರತ್ಕಲ್, ಬರ್ಕೆ, ಮಂಗಳೂರು ಉತ್ತರ, ಪಣಂಬೂರು ಪೊಲೀಸ್ ಠಾಣೆಗಳಲ್ಲಿ ವಾರೆಂಟ್ ಬಾಕಿ ಇದೆ. ಆರೋಪಿಯನ್ನು ಕಸಬಾ ಬೆಂಗ್ರೆಯ ಕಿಲೇರಿಯಾ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪಣಂಬೂರು ಪೊಲೀಸ್ ಠಾಣಾ ಪ್ರಭಾರ ಇನ್‌ಸ್ಪೆಕ್ಟರ್ ಮೋಹನ್ ಕೊಟ್ಟಾರಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಸೈ ಉಮೇಶ್‌ಕುಮಾರ್ ಹಾಗೂ ಸಿಬ್ಬಂದಿ ರಾಧಾಕೃಷ್ಣ, ಶೈಲೇಂದ್ರ, ದಾದಾಸಾಬ್ ಪಾಲ್ಗೊಂಡಿದ್ದರು.