ಕಾಲೇಜು ಬಳಿ ಗಾಂಜಾ ಮಾರಾಟ: ಓರ್ವನ ಬಂಧನ

Update: 2019-06-29 17:46 GMT

ಬೆಂಗಳೂರು, ಜೂ.29: ಕಾಲೇಜು ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, 50 ಸಾವಿರ ರೂ. ಮೌಲ್ಯದ 1 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬಾಪೂಜಿನಗರದ ಕಾರ್ತಿಕ್(26) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ನಗರದ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪಿಇಎಸ್ ಕಾಲೇಜು ಹತ್ತಿರ ಎಸ್‌ಎಲ್‌ಎನ್ ಬಾರ್ ರೆಸ್ಟೋರೆಂಟ್‌ನ ಬಳಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲಿಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 1 ಕೆ.ಜಿ 300 ಗ್ರಾಂ ತೂಕದ ಗಾಂಜಾ, 1 ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News