ಎಸೆಸೆಲ್ಸಿ ಪೂರಕ ಪರೀಕ್ಷೆ ಮೌಲ್ಯಮಾಪನ ಹಿನ್ನೆಲೆ: ನಿಷೇಧಾಜ್ಞೆ ಜಾರಿ

Update: 2019-06-29 17:48 GMT

ಬೆಂಗಳೂರು, ಜೂ.29: ಎಸೆಸೆಲ್ಸಿ ಪೂರಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಜು.5ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆ ಮೌಲ್ಯಮಾಪನ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಐದು ಮೌಲ್ಯಮಾಪನ ಕೇಂದ್ರಗಳಲ್ಲಿ ಜು.5ರಿಂದ ಮತ್ತು ಬೆಂಗಳೂರು ಉತ್ತರ ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಜು.6ರಿಂದ ಮೌಲ್ಯ ಮಾಪನ ಆರಂಭವಾಗಲಿದೆ.

ಮೌಲ್ಯಮಾಪನ ಕೇಂದ್ರಗಳಿಗೆ ಅನಗತ್ಯ ವ್ಯಕ್ತಿಗಳು ಮತ್ತು ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಿ ಈ ಕೇಂದ್ರಗಳ ಕಟ್ಟಡಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News