ಯಕ್ಷ ಶಿಕ್ಷಣ: ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಭೆ
ಉಡುಪಿ, ಜೂ.29: ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ ನಡೆಯುವ ಯಕ್ಷ ಶಿಕ್ಷಣದ ಕುರಿತ ಸಭೆಯನ್ನು ಇಂದು ನಡೆಯಿತು.
ಸಭೆಯಲ್ಲಿ ಕ್ಷೇತ್ರದ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಯಕ್ಷಗಾನ ಗುರುಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿ ದ್ದರು. ಯಕ್ಷ ಶಿಕ್ಷಣ ಟ್ರಸ್ಟನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಪ್ರತಿ ಶಾಲೆಯಲ್ಲಿ ಒಬ್ಬ ಶಿಕ್ಷಕರನ್ನು ಯಕ್ಷ ಶಿಕ್ಷಣಕ್ಕಾಗಿ ನಿಯೋಜಿಸುವ ಬಗ್ಗೆ ತೀರ್ಮಾನಿಸಲಾಯಿತು. ಪ್ರತಿ ಶಾಲೆಯಿಂದ ಒಂದು ಪ್ರದರ್ಶನವನ್ನು ಕಡ್ಡಾಯವಾಗಿ ನಡೆಸುವ ಕುರಿತು ನಿರ್ಣಯಿಸಲಾಯಿತು. ಸಭೆಯಲ್ಲಿ 50 ಶಾಲೆಗಳ ಮುಖ್ಯೋಪಾದ್ಯರು ಪಾಲ್ಗೊಂಡಿದ್ದರು.
ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ, ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಗಂಗಾಧರ ರಾವ್, ಟ್ರಸ್ಟಿನ ಕಾರ್ಯ ದರ್ಶಿ ಮುರುಳಿ ಕಡೆಕಾರ್, ಯಕ್ಷಗಾನ ಗುರು ಸಂಜೀವ ಸುವರ್ಣ, ಉಡುಪಿ ಹಾಗೂ ಬ್ರಹ್ಮಾವರದ ಶಿಕ್ಷಣ ಅಧಿಕಾರಿಗಳು ಮೊದಲಾದವರು ಹಾಜರಿದ್ದರು.