×
Ad

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವಿಲೀನ ಕೈಬಿಡಿ: ರಘುಪತಿ ಭಟ್

Update: 2019-06-30 19:35 IST

ಉಡುಪಿ, ಜೂ.30: ರಾಜ್ಯದಲ್ಲಿ ಕೇಂದ್ರದ ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಯೋಜನೆಯನ್ನು ವಿಲೀನ ಮಾಡಿರುವುದು ಸರಿಯಲ್ಲ. ಇದರಿಂದ ಬಡ ರೋಗಿಗಳಿಗೆ ತುಂಬಾ ತೊಂದರೆಯಾಗಲಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಉಡುಪಿ ಆದರ್ಶ ಆಸ್ಪತ್ರೆಯ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಆಸ್ಪತ್ರೆ ಆವರಣದಲ್ಲಿ ರವಿವಾರ ಆಯೋಜಿಸಲಾದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ವೈದ್ಯರಿಗೆ ಸನ್ಮಾನ ಸಮಾರಂಭವವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಆಯುಷ್ಮಾನ್ ಭಾರತ್ ಯೋಜನೆಯಡಿ ರೋಗಿಗಳು ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಆದರೆ ರಾಜ್ಯ ಸರಕಾರ ಇದನ್ನು ಆರೋಗ್ಯ ಕರ್ನಾಟಕದೊಂದಿಗೆ ವಿಲೀನ ಮಾಡಿರುವುದು ತಪ್ಪು. ಆದುದರಿಂದ ಈ ಎರಡು ಆರೋಗ್ಯ ಯೋಜನೆಗಳನ್ನು ಪ್ರತ್ಯೇಕವಾಗಿಸಬೇಕು ಎಂದರು.

ಈ ಯೋಜನೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾದರೆ ಸರಕಾರಿ ಆಸ್ಪತ್ರೆಯ ಶಿಾರಸ್ಸು ಪತ್ರ ನೀಡಬೇಕಾಗಿದೆ. ಇದರಿಂದ ಸರಕಾರಿ ವೈದ್ಯರು ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಆದುದರಿಂದ ಶಿಾರಸ್ಸು ಪತ್ರ ನೀಡುವ ಪದ್ಧತಿಯನ್ನು ಕೈಬಿಡಬೇಕು. ಈ ಕುರಿತು ಜು.12ರಂದು ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು ಎಂದು ಅವರು ತಿಳಿಸಿದರು.

ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ. ಭಂಡಾರಿ ಮಾತನಾಡಿದರು. ವೈದ್ಯರುಗಳಾದ ಡಾ.ರಾಮ್‌ದಾಸ್ ಗೌಡ ಕಾಪು, ಡಾ.ಕೆ.ಎಸ್.ಶೆಣೈ ಕಾರ್ಕಳ, ಡಾ.ಯಶೋಧರ ಎಂ. ಇರ್ವ ತೂರು, ಡಾ.ಚಿಕ್ಮರಿ ನಾಡ ಅವರನ್ನು ಸನ್ಮಾನಿಸಲಾಯಿತು.

ಜಿಪಂ ಸದಸ್ಯ ಗೀತಾಂಜಲಿ ಸುವರ್ಣ, ಆಸ್ಪತ್ರೆಯ ನರರೋಗ ಶಸಚಿಕಿತ್ಸಾ ತಜ್ಞ ಪ್ರೊ.ಎ.ರಾಜಾ, ಪ್ರಸೂತಿ ಮತ್ತು ಸೀರೋಗ ತಜ್ಞ ಡಾ.ಎಂ.ಎಸ್. ಉರಾಳ, ವಿಮಲಾ ಚಂದ್ರಶೇಖರ್ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿ ಸಿದರು. ಪ್ರಕಾಶ್ ಡಿ.ಕೆ. ಕಾರ್ಯಕ್ರಮ ನಿರೂಪಿಸಿದರು.

ಸರಕಾರಿ ಆಸ್ಪತ್ರೆಯಲ್ಲಿ ಸಿಗದ ಚಿಕಿತ್ಸೆ

ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಜಾಗವನ್ನು ಈ ಹಿಂದಿನ ಸರಕಾರ ಖಾಸಗಿಯವರಿಗೆ ನೀಡಿದ್ದು, ಅಲ್ಲಿ ನಿರ್ಮಿಸಲಾಗಿರುವ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಶಾಸಕ ರಘುಪತಿ ಭಟ್ ಆರೋಪಿಸಿದರು.

ಈ ಆಸ್ಪತ್ರೆಯಲ್ಲಿ ಉತ್ತಮ ಕಟ್ಟಡ, ಆಧುನಿಕ ತಂತ್ರಜ್ಞಾನ ಇದ್ದರೂ ಇಲ್ಲಿನ ವೈದ್ಯರು ಮಾತ್ರ ಸವಾಲು ಎದುರಿಸಲು ತಯಾರಿಲ್ಲ. ಆಸ್ಪತ್ರೆಗೆ ಬರುವ ಅವಧಿ ಪೂರ್ವ ಹೆರಿಗೆಯ ಪ್ರಕರಣಗಳನ್ನು ಇಲ್ಲಿನ ವೈದ್ಯರು ಖಾಸಗಿ ಆಸ್ಪತ್ರೆಗೆ ಕಳುಹಿಸು ತ್ತಿದ್ದಾರೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News