×
Ad

ಯುವ ಸಮೂಹವು ಮಾದಕ ವಸ್ತುಗಳಿಂದ ದೂರ ಉಳಿಯಲಿ: ಎಸ್ಸೈ ಸತೀಶ್ ಬಲ್ಲಾಳ್

Update: 2019-06-30 20:36 IST

ಉಡುಪಿ, ಜೂ.30: ಯುವ ಜನತೆಯು ದೇಶದ ಸಂಪತ್ತು. ಮಾದಕ ದ್ರವ್ಯಕ್ಕೆ ದಾಸರಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳದೇ ಮಾದಕ ವಸ್ತುಗಳಿಂದ ದೂರ ಉಳಿದು ಸಧೃಡ ಮತ್ತು ಆರೋಗ್ಯವಂತ ಸಮಾಜದ ಭಾಗವಾಗಬೇಕು ಎಂದು ಹಿರಿಯಡಕ ಪೊಲೀಸ್ ಠಾಣೆಯ ಉಪನಿರೀಕ್ಷಕ ಸತೀಶ್ ಬಲ್ಲಾಳ್ ಹೇಳಿದ್ದಾರೆ.

ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ, ಎನ್‌ಎಸ್‌ಎಸ್ ಘಟಕಗಳು ಮತ್ತು ಹಿರಿಯಡ್ಕ ಪೊಲೀಸ್ ಠಾಣೆಯ ಸಹಬಾಗಿತ್ವದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಆಯೋಜಿಸಲಾದ ಅಂತಾರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ದಿನಾಚರಣೆಯಲ್ಲಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯಡಕ ಪೋಲಿಸ್ ಠಾಣೆಯ ಪ್ರೊಬೆಷನರಿ ಎಸ್ಸೈ ರಾಜಶೇಖರ ವಂದಾಲಿ, ಮಾದಕವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್., ಎನ್.ಎಸ್.ಎಸ್. ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ, ಸುಭಾಷ್ ಎಚ್.ಕೆ., ಪೋಲಿಸ್ ಸಿಬ್ಬಂದಿ ಸಂತೋಶ್, ಜಯಲಕ್ಷ್ಮಿ, ಹರೀಶ್, ಭೀಮ ಉಪಸ್ಥಿತರಿದ್ದರು. ಸುಜಯಾ ಕೆ.ಎಸ್. ಸ್ವಾಗತಿಸಿದರು. ಸುಭಾಷ್ ಎಚ್.ಕೆ. ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ಶೆಟ್ಟಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News