×
Ad

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Update: 2019-06-30 21:08 IST

 ಉಡುಪಿ, ಜೂ.30: ಉಡುಪಿ ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್ ವತಿಯಿಂದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಬ್ಯಾಂಕಿನ ಸದಸ್ಯರ ಮಕ್ಕಳ 2018-19ನೆ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85, ಹಾಗೂ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಹಾಗೂ ಮೇಲ್ಪಟ್ಟು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಬಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕಿನ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಆ.16 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News