ಬಿ.ಸಿ.ರೋಡ್: ರಾಜ್ಯ ಎಸ್ಸೆಸ್ಸೆಫ್ ನಿಂದ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್

Update: 2019-06-30 15:51 GMT

ಬಿ.ಸಿ.ರೋಡ್:  ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವಿಸ್ಡಂ ಟೀಮ್ ವತಿಯಿಂದ ಶಾಲಾ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ  ಸೆಕ್ಟರ್ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹೌ ಟು ಲರ್ನ್, ಡಿವಿಷನ್ ಮಟ್ಟದಲ್ಲಿ ಪೋಷಕರಿಗೆ ಮಕ್ಕಳನ್ನು ಪೋಷಿಸುವುದು ಹೇಗೆ, ಜಿಲ್ಲಾ ಮಟ್ಟದಲ್ಲಿ ಅಧ್ಯಾಪಕರಿಗೆ ವಿದ್ಯಾರ್ಥಿಗಳೊಂದಿಗೆ ನಾವು ಎಂಬ ವಿಷಯಗಳಲ್ಲಿ ತರಗತಿಯು ಜುಲೈ ತಿಂಗಳಲ್ಲಿ  ನುರಿತ ತರಬೇತುದಾರರಿಂದ ತರಬೇತಿಯನ್ನು ಹಮಿಕೊಂಡಿದ್ದು, ಈ ಕಾರ್ಯಕ್ರಮಗಳಿಗೆ ತರಬೇತುದಾರರನ್ನು ಸೃಷ್ಟಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಆಯ್ದ  ಟ್ರೈನರ್ಸ್ ಗಳಿಗೆ ರಾಜ್ಯ ಮಟ್ಟದ ತರಬೇತಿ ಕಾರ್ಯಾಗಾರ ಎಜ್ಯು ಸಮ್ಮಿಟ್ ಟ್ರೈನರ್ಸ್ ಟ್ರೈನಿಂಗ್  ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿ ಮನ್ಶರ್ ಅಧ್ಯಕ್ಷತೆಯಲ್ಲಿ  ಬಿ.ಸಿ.ರೋಡ್ ನ ಸ್ಪರ್ಶಾ ಹಾಲ್ ನಲ್ಲಿ ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಮಾನ್ಯ ಯು.ಟಿ.ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮನ್ಶರ್ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ನಾಯಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ತರಗತಿಯನ್ನು ನಡೆಸಿದರು.

ಎಸ್ಸೆಸ್ಸೆಫ್ ರಾಷ್ಟ್ರೀಯ ಕಾರ್ಯದರ್ಶಿ ಶರೀಫ್ ಮಾಸ್ಟರ್ ಬೆಂಗಳೂರು,ಎಸ್ಸೆಸ್ಸೆಫ್ ರಾಜ್ಯ ನಾಯಕ ಶಾಕಿರ್ ಹಾಜಿ ಮಿತ್ತೂರು,ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ಸಂದೇಶ ಭಾಷಣ ಮಾಡಿದರು.

ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ, ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ,ಎಸ್ಸೆಸ್ಸೆಫ್ ದ.ಕ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ, ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ರಾಜ್ಯ ನಾಯಕರಾದ ಮುಸ್ತಫಾ ಮಾಸ್ಟರ್ ಉಳ್ಳಾಲ, ಸಫ್ವಾನ್ ಚಿಕ್ಕಮಗಳೂರು, ಶರೀಫ್ ಮಡಿಕೇರಿ, ಜಿಲ್ಲಾ ನಾಯಕರಾದ ಸಯ್ಯದ್ ಖುಬೈಬ್ ತಂಙಳ್ ಉಳ್ಳಾಲ, ಸಲೀಂ ಹಾಜಿ ಬೈರಿಕಟ್ಟೆ, ಇಬ್ರಾಹಿಂ ಅಹ್ಸನಿ ಮಂಜನಾಡಿ, ನವಾಝ್ ಸಖಾಫಿ ಅಡ್ಯಾರ್ ಪದವು ಮೊದಲಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿದರು. ರಾಜ್ಯ ನಾಯಕ ಮುಸ್ತಫಾ ಮಾಸ್ಟರ್ ಉಳ್ಳಾಲ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News