ಕಾರು ಢಿಕ್ಕಿ: ಪಾದಚಾರಿ ಮೃತ್ಯು

Update: 2019-06-30 16:03 GMT

ಬೈಂದೂರು, ಜೂ.30: ಬೀಜೂರು ಪೇಟೆಯ ಬಳಿ ಜೂ.30ರಂದು ಬೆಳಗ್ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಉಪ್ಪುಂದ ಗ್ರಾಮದ ಹೊಳೆಬಾಗಲು ಬೈಲು ನಿವಾಸಿ ದೂಳಯ್ಯ ಯಾನೆ ದುರ್ಗಾ ದೇವಾಡಿಗ ಎಂದು ಗುರುತಿಸಲಾಗಿದೆ. ಇವರು ಬಿಜೂರು ಪೇಟೆಯಿಂದ ಮನೆಗೆ ಹೋಗುವುದಕ್ಕಾಗಿ ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಇಕೋ ಸ್ಟೋರ್ಟ್ಸ್ ವಾಹನ ದೂಳಯ್ಯರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News