ವಿಶ್ವಕಪ್: ರೋಹಿತ್ 25ನೇ ಏಕದಿನ ಶತಕ

Update: 2019-06-30 16:35 GMT

ಲಂಡನ್, ಜೂ.30 ಭಾರತದ ಆರಂಭಿಕ ದಾಂಡಿಗ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಶತಕ ದಾಖಲಿಸಿದ್ದಾರೆ.

2019ರ ವಿಶ್ವಕಪ್‌ನಲ್ಲಿ ಮೂರನೇ ಶತಕ ದಾಖಲಿಸಿರುವ ಶರ್ಮಾ ಏಕದಿನ ಕ್ರಿಕೆಟ್‌ನಲ್ಲಿ ದಾಖಲಿಸಿರುವ ಶತಕಗಳ ಸಂಖ್ಯೆಯನ್ನು 25ಕ್ಕೆ ಏರಿಸಿದ್ದಾರೆ. ಅವರು 106 ಎಸೆತಗಳಲ್ಲಿ 15 ಬೌಂಡರಿಗಳ ಸಹಾಯದಿಂದ ಶತಕ ಪೂರ್ಣಗೊಳಿಸಿದರು.

ಭಾರತ 37 ಓವರ್‌ಗಳ ಅಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ 204 ರನ್ ಗಳಿಸಿದೆ.

ಶರ್ಮಾ 102ರನ್(109ಎ, 15ಬೌ) , ವಿರಾಟ್ ಕೊಹ್ಲಿ 66 ರನ್ ಗಳಿಸಿ ಔಟಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News