×
Ad

ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತ್ಯು

Update: 2019-06-30 22:45 IST
ಸಾಂದರ್ಭಿಕ ಚಿತ್ರ

ಮಂಡ್ಯ, ಜೂ.30: ನೀರಿನಲ್ಲಿ ಮುಳುಗಿ ಇಬ್ಬರು ಯುವತಿಯರು ಮೃತಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಎಡಮುರಿಯ ಕಾವೇರಿ ನದಿಯಲ್ಲಿ ಇಂದು ಸಂಜೆ ನಡೆದಿದೆ.

ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಸಮೀಪದ ಕಾವೇರಿ ನದಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರನ್ನು ಬನ್ನೂರಿನ ಪ್ರತಿಮಾ(22), ಮಳವಳ್ಳಿಯ ದಿವ್ಯಾ(24) ಎಂದು ಗುರುತಿಸಲಾಗಿದೆ.

ಇವರಿಬ್ಬರೂ ಮೈಸೂರಿನ ಖಾಸಗಿ ಕಂಪನಿ ಉದ್ಯೋಗಿಗಳಾಗಿದ್ದು, ಸಹೋದ್ಯೋಗಿಗಳ ಜೊತೆ ಪ್ರವಾಸಕ್ಕೆ ಬಂದಿದ್ದಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕೆಆರ್‌ಎಸ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News