ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಬಿ.ನಾಗೇಂದ್ರ ಪೊಲೀಸ್ ವಶಕ್ಕೆ, ಬಿಡುಗಡೆ

Update: 2019-07-01 16:46 GMT

ಬೆಂಗಳೂರು, ಜು.1: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪದೇ ಪದೇ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸರಿಗೆ ವಶಕ್ಕೆ ಪಡೆಯಲು ಸೂಚಿಸಿತು. ಅಲ್ಲದೆ, ರೀಕಾಲ್ ಮಾಡಿಸಿಕೊಂಡ ಬಳಿಕ ಬಿಡುಗಡೆಗೆ ಆದೇಶಿಸಿತು.

ನಾಗೇಂದ್ರ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಂತೆ ತಕ್ಷಣವೇ ತಮ್ಮ ವಶಕ್ಕೆ ತೆಗೆದುಕೊಳ್ಳುವಂತೆ ನ್ಯಾಯಾಧೀಶರು ಪೊಲೀಸರಿಗೆ ಆದೇಶ ನೀಡಿದರು. ಈ ಆದೇಶದ ಹಿನ್ನೆಲೆಯಲ್ಲಿ ಪೊಲೀಸರು ನಾಗೇಂದ್ರನನ್ನು ವಶಕ್ಕೆ ಪಡೆದುಕೊಂಡರು.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ವಿಚಾರಣೆಗೆ ಗೈರು ಹಾಜರಾಗಿದ್ದರು. ಇದರಿಂದ, ನ್ಯಾಯಾಲಯ ನಾಗೇಂದ್ರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿತ್ತು. ಸೋಮವಾರ ವಾರೆಂಟ್‌ನ ರೀಕಾಲ್ ಮಾಡಿಸಿಕೊಳ್ಳಲು ಆಗಮಿಸಿದ ವೇಳೆ ವಶಕ್ಕೆ ಪಡೆಯುವಂತೆ ನ್ಯಾಯಾಧೀಶರು ಸೂಚಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ನಾಗೇಂದ್ರ ಕೂಡ ವಿಾರಣೆಯನ್ನು ಎದುರಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News