ಯುವ ವಿಜ್ಞಾನಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2019-07-01 18:32 GMT

ಬೆಂಗಳೂರು, ಜು.1: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು 2018-19ನೆ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ 9 ರಿಂದ 12ನೆ ವರ್ಗದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಾಗಿ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಇದರಲ್ಲಿ ಭಾಗವಸಲಿಚ್ಛಿಸುವವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವೆಬ್‌ಸೈಟ್ www.krvp.org ನಿಂದ ಅರ್ಜಿಯನ್ನು ಪಡೆದು ಜು.15 ರೊಳಗಾಗಿ ತಮ್ಮ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿಗೆ ಹಾಗೂ ಅರ್ಜಿಯ ಒಂದು ಪ್ರತಿಯನ್ನು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕೇಂದ್ರ ಕಚೇರಿಗೆ ಸಲ್ಲಿಸುವುದು.

ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಜು.27ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಏಕಕಾಲದಲ್ಲಿ ಆಯೋಜಿಸಲಾಗುವುದು. ಜಿಲ್ಲಾ ಮಟ್ಟದ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ಯುವ ವಿಜ್ಞಾನಿಗಳು ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅರ್ಹತೆ ಪಡೆಯತ್ತಾರೆ.

ಎಳೆಯ ವಯಸ್ಸಿನಲ್ಲೇ ’ವೈಜ್ಞಾನಿಕ ವಿಧಾನ’ವನ್ನು ಮನವರಿಕೆ ಮಾಡಿ, ಭವಿಷ್ಯದ ವಿಜ್ಞಾನಿಗಳನ್ನು ರೂಪಿಸುವುದು, ರಾಜ್ಯದ/ರಾಷ್ಟ್ರದ ವೈಜ್ಞಾನಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವುದು ಹಾಗೂ ಮೂಲ ವಿಜ್ಞಾನ ವಿಷಯಗಳಲ್ಲಿ ಆಸಕ್ತಿ, ಚಿಂತನ ಕೌಶಲ್ಯವನ್ನು ವರ್ಧಿಸುವುದು ಈ ಪ್ರಶಸ್ತಿಯ ಉದ್ದೇಶವಾಗಿದೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಗೌರವ ಕಾರ್ಯದರ್ಶಿ ಗಿರೀಶ್ ಕಡ್ಲೇವಾಡ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News