×
Ad

ಕೊಳ್ಳೇಗಾಲ ಆಸ್ಪತ್ರೆಯಲ್ಲಿ ವ್ಯಕ್ತಿ ಮೃತ್ಯು : ವೈದ್ಯರ ನಿರ್ಲಕ್ಷ್ಯದ ಆರೋಪ

Update: 2019-07-02 14:09 IST

ಹನೂರು : ಅರವಳಿಕೆಯ ಹೈಡೋಸ್​ನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನಲಾದ ಘಟನೆ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯತನದಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ ಮೃತ ವ್ಯಕ್ತಿಯ ಸಂಬಂಧಿಕರು ಹನೂರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

ಹನೂರಿನ ಹಾಲಿನ ವ್ಯಾಪಾರಿ ಸುರೇಶ್ (42) ಮೃತರು ಎಂದು ಗುರುತಿಸಲಾಗಿದೆ.

ಇತ್ತೀಚೆಗಷ್ಟೆ ಸುರೇಶ್ ಅಪಘಾತಕ್ಕೊಳಗಾಗಿ ಎರಡು ಕಾಲಿಗೂ ಕಬ್ಬಿಣದ ರಾಡ್ ಹಾಕಿಸಿಕೊಂಡಿದ್ದರು. ಸೋಮವಾರ ರಾಡ್ ತೆಗೆಸಲು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ವೈದ್ಯರೋರ್ವರು ಅನಸ್ತೇಷಿಯಾ ನೀಡಿದ್ದಾರೆ.

ಅರವಳಿಕೆ ಚುಚ್ಚು ಮದ್ದು ನೀಡುತ್ತಿದ್ದಂತೆ  ಪ್ರಜ್ಞಾಹೀನರಾಗಿದ್ದು ಕೂಡಲೇ ವೈದ್ಯರೇ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ, ಮೃತಪಟ್ಟರು ಎಂದು ಮೃತ ವ್ಯಕ್ತಿಯ ಸಂಬಂಧಿಕರು ಆರೋಪ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News