ರಸ್ತೆ ವಿಭಜಕಕ್ಕೆ ಆಟೋ ಢಿಕ್ಕಿ: ಓರ್ವ ಮೃತ್ಯು, 8 ಮಂದಿಗೆ ಗಂಭೀರ ಗಾಯ

Update: 2019-07-02 12:19 GMT

ಚಾಮರಾಜನಗರ, ಜು.2: ಆಟೋ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 8 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಕಟ್ನವಾಡಿ ಗ್ರಾಮದ ಪುಟ್ಟರಾಚಯ್ಯ(60) ಮೃತಪಟ್ಟವರು. ಕೊಳ್ಳೇಗಾಲದಿಂದ ಕಟ್ನವಾಡಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾ, ಬಾಪುನಗರದ ಬಳಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಪುಟ್ಟರಾಚಯ್ಯ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾರೆ. ಮೂವರು ಮಕ್ಕಳು ಸೇರಿದಂತೆ 8 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಕೊಳ್ಳೇಗಾಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಾಲಕನ ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News