ಪ್ರೇಮ ವೈಫಲ್ಯ: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Update: 2019-07-02 13:02 GMT

ಬೆಂಗಳೂರು, ಜು.2: ಪ್ರೇಮ ವೈಫಲ್ಯದಿಂದ ನೊಂದ ಪದವಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲೇಶ್ ಪಾಳ್ಯದ ಗ್ಲೋಬಲ್ ಇಂಟರ್‌ನ್ಯಾಷನಲ್ ಬಳಿಯ ಶಿಲ್ಪಾ(22) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಪದವಿ ವ್ಯಾಸಂಗ ಮಾಡುತ್ತಿದ್ದ ಶಿಲ್ಪಾ, ಪ್ರೇಮ ವೈಫಲ್ಯದಿಂದ ನೊಂದು ಖಿನ್ನತೆಗೊಳಗಾಗಿದ್ದರು. ಸೋಮವಾರ ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ನೇಣು ಬಿಗಿದು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News