ವೆನ್ಲಾಕ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆ: ಸಚಿವ ಖಾದರ್
ಮಂಗಳೂರು, ಜು.2: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡುವ ಅತ್ಯಾಧುನಿಕ ಚಿಕಿತ್ಸಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು.
ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಆರೋಗ್ಯ ರಕ್ಷಾ ಸಭೆಯಲ್ಲಿ ಹೃದಯ ರೋಗಿಗಳಿಗೆ ಚಿಕಿತ್ಸೆ ನೀಡುವ ಕೇಂದ್ರವನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಯ ನೆರವಿನೊಂದಿಗೆ ಸ್ಥಾಪಿಸಲಾಗುವುದು. ಇದಲ್ಲದೆ 36 ಹಾಸಿಗೆಗಳ ತೀವ್ರ ನಿಗಾ ಘಟಕವನ್ನು ಸ್ಥಾಪಿಸಲಾಗುವುದು ಎಂದು ಸಚಿವ ಖಾದರ್ ತಿಳಿಸಿದರು.
25 ಕೋಟಿಯ ನೂತನ ವೈದ್ಯಕೀಯ ಶಾಸ್ತ್ರದ ವಿಭಾಗಕ್ಕೆ ತೀವ್ರ ನಿಗಾ ಘಟಕ ಸ್ಥಾಪಿಸಲು ಸ್ಮಾರ್ಟ್ ಸಿಟಿ ವತಿಯಿಂದ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಒಪ್ಪಿರುತ್ತಾರೆ. ಇಲ್ಲಿಗೆ ಬೇಕಾಗುವ ಮಾನವ ಸಂಪನ್ಮೂಲ ಸೌಲಭ್ಯ ಪಡೆಯಲು ಸಚಿವ ಖಾದರ್ ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿ ನಿರ್ವಹಣೆ ಮಾಡುತ್ತಿರುವ ಸಿಟಿ ಸ್ಕ್ಯಾನ್ ಮತ್ತು ಎಂಆರ್‌ಐ ಸ್ಕ್ಯಾನ್ ಬಳಸುವ ಫಲಾನುಭವಿಗಳಿಗೆ ಸರಕಾರದಿಂದ ವೆಚ್ಚ ಭರಿಸಲಾಗುವುದು. ಇದರ ಉಪಯೋಗ ಪಡೆದುಕೊಳ್ಳಲು ಸಚಿವ ಖಾದರ್ ತಿಳಿಸಿದರು.