7ನೆ ಮಹಡಿಯಿಂದ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ

Update: 2019-07-02 16:11 GMT

ಬೆಂಗಳೂರು, ಜು.2: ನಗರದ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ ತಾಯಿಯು ತನ್ನ ಮಗುವಿನೊಂದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್‌ಟಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಸಂಜೆ 7 ಗಂಟೆ ಸುಮಾರಿಗೆ ನಡೆದಿದೆ.

ಆರ್‌ಟಿ ನಗರದ ವೈಟ್‌ಹೌಸ್ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಭಾವನಾ(29) ಹಾಗೂ 2 ವರ್ಷ ದೇವಂತ್ ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ಇನ್ನಷ್ಟೇ ದೊರೆಯಬೇಕಿದೆ.

ಈ ಸಂಬಂಧ ಆರ್‌ಟಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News