ಐಎಎಸ್ ಉಚಿತ ಪರೀಕ್ಷಾ ಪೂರ್ವ ತರಬೇತಿ
Update: 2019-07-02 21:52 IST
ಉಡುಪಿ, ಜು. 2: 2019-20ನೇ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಪ್ರೊಬೇಷನರಿ ಆಪೀಸರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳಿಗೆ ಸೇರಿದ ಅರ್ಹ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜು.12 ಕೊನೆಯ ದಿನವಾಗಿದೆ. ಮಾಹಿತಿಗೆ ಇಲಾಖೆ ವೆಬ್‌ಸೈಟ್ www.backwardclasses.kar.nic.in, ಸಹಾಯವಾಣಿ ಸಂಖ್ಯೆ: 080-8050770004 ಹಾಗೂ ಕಚೇರಿ ದೂರವಾಣಿ ಸಂಖ್ಯೆ: 0820-2573881ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.