ಬಸ್ ನಿಲ್ದಾಣಕ್ಕೆ ಟಾಟಾ ಸುಮೋ ಢಿಕ್ಕಿ: ಚಾಲಕ ಸ್ಥಳದಲ್ಲೇ ಮೃತ್ಯು
Update: 2019-07-02 23:31 IST
ಶಿವಮೊಗ್ಗ, ಜು. 2: ವೇಗವಾಗಿ ಆಗಮಿಸಿದ ಟಾಟಾ ಸುಮೋ ವಾಹನವೊಂದು ರಸ್ತೆ ಬದಿಯ ಬಸ್ ನಿಲ್ದಾಣ ಕಟ್ಟಡಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭದ್ರಾವತಿ ನಗರದ ಹೊರವಲಯ ಜೇಡಿಕಟ್ಟೆ ಗ್ರಾಮದ ಬಳಿ ಸೋಮವಾರ ನಡೆದಿದೆ.
ರವಿಕುಮಾರ್ ಮೃತಪಟ್ಟ ಚಾಲಕ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ನಗರದ ಮಲವಗೊಪ್ಪದಿಂದ ಭದ್ರಾವತಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಿತಿಮೀರಿದ ವೇಗ, ಅಜಾಗರೂಕ ಚಾಲನೆಯೇ ಅವಘಡಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.