×
Ad

ಇಬ್ಬರು ಕಳವು ಆರೋಪಿಗಳ ಬಂಧನ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ

Update: 2019-07-02 23:32 IST

ಶಿವಮೊಗ್ಗ, ಜು. 2: ಮನೆಯೊಂದರ ನಗನಾಣ್ಯ ದೋಚಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸೊರಬ ಠಾಣೆ ಪೊಲೀಸರು, ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿರುವ ಘಟನೆ ವರದಿಯಾಗಿದೆ. 

ಸೊರಬ ತಾಲೂಕಿನ ಜಯಂತಿ ಗ್ರಾಮದ ನಿವಾಸಿ ಸಂತೋಷ (29) ಹಾಗೂ ಸೊರಬ ಪಟ್ಟಣದ ನಿವಾಸಿ ಯೋಗೇಶ್ (45) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ ಬಂಗಾರದ ನೆಕ್ಲೆಸ್, ಕಿವಿಯೊಲೆ, ಸರ ಸೇರಿದಂತೆ 60.980 ಗ್ರಾಂ ತೂಕದ ವಿವಿಧ ಚಿನ್ನಾಭರಣ ಹಾಗೂ ಎರಡು ಬಜಾಜ್ ಪಲ್ಸರ್ ಬೈಕ್‍ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಘಟನೆ ಹಿನ್ನೆಲೆ: ಜೂನ್ 21 ರಂದು ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಅಕ್ಕಮಹಾದೇವಿ ಎಂಬುವರ ಮನೆಯ ಬಾಗಿಲಿಗೆ ಹಾಕಿದ್ದ ಬೀಗ ಮುರಿದು, ಒಳ ಪ್ರವೇಶಿಸಿದ ಕಳ್ಳರು 80 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ ಮೊಬೈಲ್ ಪೋನ್ ಅಪಹರಿಸಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News