ಚಿಂತಾಮಣಿಯಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

Update: 2019-07-03 14:18 GMT

ಬೆಂಗಳೂರು, ಜು. 3: ಕೋಲಾರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. 

ವಿದೇಶದಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಂತಾಮಣಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 12 ಮಂದಿ ಮೃತಪಟ್ಟಿರುವ ವಿಷಯ ತಿಳಿದು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಈ ಅಪಘಾತ ಅತ್ಯಂತ ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News