×
Ad

ಮರಕ್ಕೆ ಢಿಕ್ಕಿಯಾದ ಸ್ಕಾರ್ಪಿಯೋ: ನಾಲ್ವರಿಗೆ ಗಾಯ

Update: 2019-07-03 19:59 IST

ಮಡಿಕೇರಿ, ಜು.3 : ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಾರ್ಪಿಯೋ ವಾಹನ ಚಾಲಕನ ನಿಯಂತ್ರಣಕ್ಕೆ ಸಿಗದೆ ಮರಕ್ಕೆ ಢಿಕ್ಕಿ ಹೊಡೆದು ತೋಟದೊಳಗೆ ನುಗ್ಗಿರುವ ಘಟನೆ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ತಿರುವಿನಲ್ಲಿ ನಡೆದಿದೆ.

ಬೆಂಗಳೂರಿನಿಂದ 6 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮಡಿಕೇರಿಗೆ ಪ್ರವಾಸಕ್ಕೆಂದು ಸ್ಕಾರ್ಪಿಯೋದಲ್ಲಿ ಆಗಮಿಸುತ್ತಿದ್ದ ಸಂದರ್ಭ ತಿರುವಿನಲ್ಲಿ ಬರೆಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಎಡಕ್ಕೆ ತಿರುಗಿಸಿದ ಸಂದರ್ಭ ತೋಟದೊಳಗೆ ನುಗ್ಗಿದೆ.

ಚಾಲಕ ಸೇರಿದಂತೆ ನಾಲ್ವರಿಗೆ ಗಾಯಗಳಾಗಿದ್ದು, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News