ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

Update: 2019-07-03 15:27 GMT

ಉಡುಪಿ, ಜು.3: 2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಡಿಪ್ಲೋಮಾ, ಲ್ಯಾಟರಲ್ ಎಂಟ್ರಿ (ಇಂಜಿನಿಯರಿಂಗ್ ಕೋರ್ಸ್‌ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಮಾತ್ರ) ಪಿಜಿ ಕೋರ್ಸ್‌ಗಳಾದ ಎಂಬಿಎ, ಎಂಸಿಎ, ಎಂಟೆಕ್, ಎಂಇ ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶುಲ್ಕ ಹೊಂದಾಣಿಕೆ ಮಾಡಲಾಗುತ್ತದೆ.

ಮೇಲಿನ ಎಲ್ಲಾ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ, ಮತ್ತು ಪ್ರ-3ಬಿಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪ ಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದರ ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ.ಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈ್ ಮೂಲಕ ಆಹ್ವಾನಿಸಲಾಗಿದೆ.

ಮೇಲಿನ ಎಲ್ಲಾ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ, ಮತ್ತು ಪ್ರ-3ಬಿಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪ ಜಾತಿಗಳು, ಅಲ್ಪಸಂಖ್ಯಾತರು ಮತ್ತು ಅದರ ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ) ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ.ಗಳ ಮಿತಿಯಲ್ಲಿ ಇರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ಸ್ವೀಕೃತಗೊಂಡ ಅರ್ಜಿಗಳಲ್ಲಿ ಅನುದಾನ ಲ್ಯತೆ ಮತ್ತು ಸರಕಾರದ ಆದೇಶ ದನ್ವಯ ಪ್ರವರ್ಗವಾರು 70:30ರ ಅನುಪಾತ ಹಾಗೂ ರ್ಯಾಂಕ್‌ವಾರು ಪರಿಗಣಿಸಿ ಆಯ್ಕೆ ಮಾಡಲಾಗುವುದು.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‌ಸೈಟ್www.karnataka.gov.in/dbcdc  -ರಲ್ಲಿ- Mozilla firefox web browser Username-dcet Passward-dcet@ನಲ್ಲಿ ಲಾಗ್‌ಇನ್ ಆಗಿ ವೆಬ್‌ಸೈಟ್‌ನಲ್ಲಿ ಲ್ಯವಿರುವ 2019 ಮತುತಿ 123 ನ್ನು ನಮೂದಿಸಿ, ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು.

ಜಾತಿ ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್/ ಚುನಾವಣಾ ಗುರುತು ಚೀಟಿ, ಎಸೆಸೆಲ್ಸಿ ಅಂಕಪಟ್ಟಿ, ಸಿಇಟಿ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್‌ಗಳನ್ನು ಸ್ಕ್ಯಾನ್ ಮಾಡಿ, ಅರ್ಜಿಯೊಂದಿಗೆ ಆನ್‌ಲೈನ್‌ನಲ್ಲಿ ಜುಲೈ 20ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿಯು ಒಂದೇ ಜಿಲ್ಲೆಯಲ್ಲಿ ಅರ್ಜಿ ಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚಿನ ಜಿಲ್ಲೆಗಳಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಜಿಲ್ಲಾಧಿಕಾರಿಗಳ ಸಂಕೀರ್ಣ, ಮಣಿಪಾಲ, ಉಡುಪಿ, ಸಹಾಯವಾಣಿ :0820-2574882/ 080-22374832ನ್ನು ಸಂಪರ್ಕಿಸುವಂತೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News