×
Ad

ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ: ಎಸ್‌ಎಫ್‌ಐ ಖಂಡನೆ

Update: 2019-07-03 21:46 IST

ಮಂಗಳೂರು, ಜು.3: ಪುತ್ತೂರಿನ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಖಂಡಿನೆ ವ್ಯಕ್ತಪಡಿಸಿದೆ.

ಗಾಂಜಾ ಸೇವನೆಯಿಂದಾಗಿ ಸರಣಿಯಾಗಿ ಕುಕೃತ್ಯಗಳು ನಡೆಯುತ್ತಿದೆ. ಇತ್ತೀಚೆಗೆ ದೇರಳಕಟ್ಟೆಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲೂ ಆರೋಪಿ ಅಮಲು ಪದಾರ್ಥ ಸೇವನೆ ಮಾಡಿ ಪೈಶ್ಯಾಚಿಕ ಕೃತ್ಯ ನಡೆಸಿದ್ದಾನೆ. ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಘಟನೆಯಲ್ಲೂ ಆರೋಪಿಗಳು ಅಮಲು ಪದಾರ್ಥ ಸೇವನೆ ಮಾಡಿ ಜಿಲ್ಲೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ ಎಂದು ಎಸ್‌ಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಮಾಧುರಿ ಬೋಳಾರ್ ತಿಳಿಸಿದ್ದಾರೆ.

ಇತ್ತೀಚೆಗೆ ಬೆಳ್ತಂಗಡಿಯ ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲೂ ಆರೋಪಿಗಳು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ. ಯಾವುದೇ ಶಕ್ತಿಗಳ ಒತ್ತಡಕ್ಕೆ ಒಳಗಾಗದೆ ಅತ್ಯಾಚಾರವನ್ನು ಎಸಗಿದ ಆರೋಪಿಗಳಿಗೆ ಶೀಘ್ರ ಕಠಿಣ ಶಿಕ್ಷೆ ನೀಡಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ಅವರು ಒತ್ತಾಯಿಸಿದರು.

ಅಮಲು ಪದಾರ್ಥಗಳ ಸಾಗಾಟವನ್ನು ತಡೆಗಟ್ಟಲು ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಶಿಕ್ಷೆ ಆಗದೆ ಇದ್ದಲ್ಲಿ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಧುರಿ ಬೋಳಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News