×
Ad

ವಾರದೊಳಗೆ ಪಾಲಿಕೆ ಸದಸ್ಯರ ಆಸ್ತಿ ವಿವರ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

Update: 2019-07-03 21:56 IST

ಬೆಂಗಳೂರು, ಜು.3: ನಿಯಮದಂತೆ ಆಸ್ತಿ ಘೋಷಣೆ ಮಾಡಿಕೊಳ್ಳದ ಬಿಬಿಎಂಪಿಯ 34 ಸದಸ್ಯರನ್ನು ಅನರ್ಹಗೊಳಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಈ ಕುರಿತು ವರದಿ ಸಲ್ಲಿಸಲು ಬಿಬಿಎಂಪಿಗೆ ಸೂಚಿಸಿದೆ.

ಈ ಕುರಿತು ಸಾಮಾಜಿಕ ಹೋರಾಟಗಾರ ಕೆ.ಅನಿಲ್‌ಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಕರ್ನಾಟಕ ಪೌರಾಡಳಿತ ಕಾಯ್ದೆ-1979ರ ಅನ್ವಯ ಬಿಬಿಎಂಪಿ ಸದಸ್ಯರುಗಳು ಆಸ್ತಿಯ ವಿವರಗಳನ್ನು ಘೋಷಣೆ ಮಾಡಬೇಕು. ಆದರೆ, ಈವರೆಗೆ ಆಸ್ತಿಯ ವಿವರಗಳನ್ನು ಘೋಷಣೆ ಮಾಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸರಕಾರದ ಪರ ವಾದಿಸಿದ ವಕೀಲರು, ಬಿಬಿಎಂಪಿ ಸದಸ್ಯರ ಆಸ್ತಿ ಘೋಷಣೆಗೆ ಸಂಬಂಧಿಸಿದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಒಂದು ವಾರ ಕಾಲಾವಕಾಶ ಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಒಂದು ವಾರದೊಳಗೆ ಪಾಲಿಕೆಗೆ ವರದಿ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News