ಶಾಸಕರಿಗೆ ಉಚಿತ ವೈದ್ಯಕೀಯ ಸೌಲಭ್ಯ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

Update: 2019-07-03 16:27 GMT

ಬೆಂಗಳೂರು, ಜು.3: ವಿಧಾನ ಪರಿಷತ್ ಸದಸ್ಯರು, ಶಾಸಕರಿಗೆ ಉಚಿತ ವೈದ್ಯಕೀಯ ಸೌಲಭ್ಯ ಸೇರಿ ಇತರೆ ಸೌಲಭ್ಯಗಳನ್ನು ಕಡಿಮೆ ದರದಲ್ಲಿ ಒದಗಿಸಲು ಸರಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ವಿಧಾನ ಪರಿಷತ್ ಸದಸ್ಯರು, ಶಾಸಕರಿಗೆ ಉಚಿತವಾಗಿ ವೈದ್ಯಕೀಯ ಸೌಲಭ್ಯ, ದೂರವಾಣಿ ಭತ್ತೆ ಸೇರಿ ಇನ್ನಿತರ ಸೌಲಭ್ಯಗಳನ್ನು ನೀಡಲು ಸರಕಾರ ಕೋಟ್ಯಂತರ ರೂ.ಖರ್ಚು ಮಾಡುತ್ತಿದೆ. ಆದರೆ, ಸರಕಾರವೇ ಪರ್ಯಾಯವಾಗಿ ಅಗ್ಗದ ದರದಲ್ಲಿ ಸಿಗುತ್ತಿರುವ ಸೌಲಭ್ಯಗಳನ್ನು ಒದಗಿಸಲು ನಿರ್ದೇಶಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು, ಅರ್ಜಿದಾರರ ಮನವಿ ಕಾನೂನಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿಯನ್ನು ವಜಾಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News