ಉಮ್ರಾ ನಿರ್ವಹಿಸಿ ಮರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಗುಂಡಿಕ್ಕಿ ಇಬ್ಬರ ಹತ್ಯೆ

Update: 2019-07-03 16:44 GMT

ಲಾಹೋರ್, ಜು. 3: ಸೌದಿ ಅರೇಬಿಯದಲ್ಲಿ ಉಮ್ರಾ ನಿರ್ವಹಿಸಿ ಸ್ವದೇಶಕ್ಕೆ ಮರಳುತ್ತಿದ್ದ ಇಬ್ಬರು ಪಾಕಿಸ್ತಾನೀಯರನ್ನು ಬುಧವಾರ ಲಾಹೋರ್ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

ಘಟನೆಗೆ ವೈಯಕ್ತಿಕ ದ್ವೇಷ ಕಾರಣ ಎಂದು ಹೇಳಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ಆತಂಕದ ಕ್ಷಣಗಳನ್ನು ಕಳೆದರು.

ಘಟನೆಯು ಅಂತರ್‌ರಾಷ್ಟ್ರೀಯ ವಿಮಾನಗಳ ಆಗಮನದ ವಿಭಾಗದಲ್ಲಿ ನಡೆದಿದೆ ಎಂದು ಪೊಲೀಸರು ಹೇಳಿರುವುದಾಗಿ ‘ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವರದಿ ಮಾಡಿದೆ.

ಗುಂಡು ಹಾರಾಟದಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ. ಇಬ್ಬರು ಆರೋಪಿಗಳನ್ನು ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯ ಬಳಿಕ, ವಿಮಾನ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News