ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

Update: 2019-07-03 16:52 GMT

ಉಡುಪಿ, ಜು.3: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿ ಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ರಾತ್ರಿ ಸಂತೆಕಟ್ಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬೈಕಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಅಪಘಾತ ನಡೆಸಿದ ವಾಹನ ನಿಲ್ಲಿಸದೆ ಪರಾರಿಯಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡು ಸುಮಾರು 50ವರ್ಷ ಪ್ರಾಯದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರು. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ.

ಸ್ಥಳಕ್ಕೆ ಉಡುಪಿ ಸಂಚಾರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News