ಅಲ್ಪಸಂಖ್ಯಾತರ ಆಯೋಗಕ್ಕೆ ನಾಮ ನಿರ್ದೇಶನಕ್ಕೆ ಅರ್ಜಿ ಆಹ್ವಾನ

Update: 2019-07-03 17:03 GMT

ಬೆಂಗಳೂರು, ಜು.3: ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧಿನಿಯಮ-1994ರಲ್ಲಿ ಅಧಿಸೂಚಿಸಿರುವ ಪ್ರಕಾರ ಅಲ್ಪಸಂಖ್ಯಾತರ ಪಂಗಡಕ್ಕೆ ಸೇರಿದ ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ್ ಮತ್ತು ಪಾರ್ಸಿ ಪಂಗಡದ ಅಭ್ಯರ್ಥಿಗಳಿಂದ ಅಲ್ಪಸಂಖ್ಯಾತರ ಆಯೋಗಕ್ಕೆ ನಾಮನಿರ್ದೇಶನ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಾಮನಿರ್ದೇಶನಕ್ಕೆ ಅಗತ್ಯವಾದ ಪದವಿಯಲ್ಲಿ ತೇರ್ಗಡೆ ಹಾಗೂ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಉನ್ನತಿಗಾಗಿ ತೊಡಗಿಸಿಕೊಂಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೊಹರು ಲಕೋಟೆಯಲ್ಲಿ ಕಾರ್ಯದರ್ಶಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 205, 2ನೆ ಮಹಡಿ ವಿಕಾಸ ಸೌಧ, ಬೆಂಗಳೂರು ಕಚೇರಿಯಲ್ಲಿ ಜು.10ರ ಸಂಜೆ 5ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು.

ಹೆಚ್ಚಿನ ವಿವರಗಳಿಗೆ ದೂ: 9980584150, 944830402 ಸಂಪರ್ಕಿಸಲು ವಕ್ಫ್ ಇಲಾಖೆ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News