×
Ad

ಅಕ್ರಮ ಮಳಿಗೆ ನಿರ್ಮಾಣ: ಮಾಹಿತಿ ನೀಡಲು ಪಾಲಿಕೆಗೆ ಹೈಕೋರ್ಟ್ ಸೂಚನೆ

Update: 2019-07-03 22:34 IST

ಬೆಂಗಳೂರು, ಜು.3: ನಗರದ ಕೃಷ್ಣ ರಾಜೇಂದ್ರ ಮಾರುಕಟ್ಟೆ ಸಂಕೀರ್ಣದಲ್ಲಿ ಅಕ್ರಮ ಮಳಿಗೆಗಳ ತೆರವಿಗೆ ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಬಿಬಿಎಂಪಿಗೆ ಈ ಕುರಿತು ಮಾಹಿತಿ ನೀಡಲು ಹೈಕೋರ್ಟ್ ಸೂಚಿಸಿದೆ.

ಹೂವಿನ ವರ್ತಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಕೆ.ಆರ್.ಮಾರುಕಟ್ಟೆಯಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿ ಕಟ್ಟಡ, ಮಳಿಗೆಗಳನ್ನು ನಿರ್ಮಿಸಿದ್ದಾರೆ. ಹೀಗಾಗಿ, ಈ ಮಳಿಗೆಗಳನ್ನು ತೆರವುಗೊಳಿಸಲು ನಿರ್ದೇಶಿಸಬೇಕೆಂದು ಅರ್ಜಿದಾರರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿದಾರರ ಪರವಾಗಿ ಆರ್.ಪೋತ್ವಾಲ್ ಅವರು ವಾದಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News