×
Ad

ಪತ್ರಕರ್ತ ಸಮಾಜವನ್ನು ತಿದ್ದಿಕೊಳ್ಳುವ ವ್ಯಕ್ತಿ: ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್

Update: 2019-07-03 23:06 IST

ಕಾಪು : ಪತ್ರಕರ್ತ ಎಂದರೆ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡುವ ಸಂಪನ್ಮೂಲ ವ್ಯಕ್ತಿ ಎಂದು ಎಂದು ಕಾಪು ತಹಶೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಪತ್ರಿಕೆ ಮತ್ತು ಪತ್ರಕರ್ತ ಸಾಮಾಜಿಕ ಜವಾಬ್ದಾರಿಯ ಪ್ರತೀಕವಾಗಿ ಕಾರ್ಯನಿರ್ವಹಿಸಬೇಕಿದೆ. ಪತ್ರಕರ್ತ ಪ್ರತೀಯೊಂದು ಸಂದರ್ಭದಲ್ಲೂ ಸಂಶೋಧಕನ ರೀತಿಯಲ್ಲಿ ಕಾರ್ಯ ನಿರ್ವಹಿಸಿದಾಗ ಸಮಾಜದ ಜನರ ಮನ ಗೆಲ್ಲಲು ಸಾಧ್ಯವಿದೆ ಎಂದ ಅವರು, ಪತ್ರಕರ್ತರು ತನ್ನ ಜೀವನದಲ್ಲಿ ಸತ್ಯದ ಜೊತೆಗೆ ಮಾನವೀಯತೆಯನ್ನೂ ಅನುಷ್ಟಾನಿಸಿಕೊಂಡು, ಜನಪರವಾಗಿ ಕೆಲಸ ಮಾಡುವುದು ಇಂದಿನ ಅಗತ್ಯತೆಯಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ನಿತ್ಯಾನಂದ ಪಡ್ರೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ದ ಲೇಖಕ ಜಲಂಚಾರು ರಘುಪತಿ ತಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಾಪು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣೇಶ್ ಬಿಜೈ ಮುಖ್ಯಅತಿಥಿಯಾಗಿದ್ದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಮಚಂದ್ರ ಆಚಾರ್ಯ, ಕಾರ್ಯಕಾರಿ ಸಮಿತಿಯ ಸದಸ್ಯ ಪುಂಡಲೀಕ ಮರಾಠೆ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾ„ಕಾರಿ ಬಾಲಕೃಷ್ಣ ಪೂಜಾರಿ ಉಚ್ಚಿಲ ಉಪಸ್ಥಿತರಿದ್ದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಾಕೇಶ್ ಕುಂಜೂರು ಸ್ವಾಗತಿಸಿದರು. ಕಾರ್ಯದರ್ಶಿ ವಾದಿರಾಜ ರಾವ್ ನಡಿಮನೆ ವಂದಿಸಿದರು. ಮಾಜಿ ಉಪಾಧ್ಯಕ್ಷ ಹರೀಶ್ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News