ಅತ್ಯಾಚಾರ ಪ್ರಕರಣ: ವಿಮೆನ್ಸ್ ಇಂಡಿಯ ಮೂವ್‌ಮೆಂಟ್ ಖಂಡನೆ

Update: 2019-07-03 17:46 GMT

ಮಂಗಳೂರು, ಜೂ.3: ಪುತ್ತೂರಿನ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಅಮಾನವೀಯವಾಗಿದ್ದು, ಕೃತ್ಯವನ್ನು ವಿಮೆನ್ಸ್ ಇಂಡಿಯ ಮೂವ್‌ಮೆಂಟ್ ದ.ಕ. ಜಿಲ್ಲಾ ಸಮಿತಿ ಖಂಡಿಸಿದೆ.

 ಕೃತ್ಯದಿಂದ ಇಡೀ ರಾಜ್ಯವೇ ತಲೆತಗ್ಗಿಸುವಂತಹ ವಾತಾವರಣ ಸೃಷ್ಟಿಯಾಗಿದೆ. ಕಾಲೇಜಿನ ಕ್ಯಾಂಪಸ್‌ನಲ್ಲಿ ಮಾದಕದ್ರವ್ಯ ಎಲ್ಲಿಂದ ಸರಬರಾಜು ಆಗುತ್ತದೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಬೇಕು ಎಂದು ವುಮೆನ್ಸ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾಧ್ಯಕ್ಷೆ ನಸ್ರಿಯಾ ಬೆಳ್ಳಾರೆ ಒತ್ತಾಯಿಸಿದ್ದಾರೆ.

ಜಿಲ್ಲೆಯ ಶಾಂತಿಯನ್ನು ಕದಡುವ ಮತ್ತು ತನ್ನ ಪಕ್ಷದ ರಾಜಕೀಯ ಲಾಭಕ್ಕಾಗಿ ಘಂಟಾಘೋಷವಾಗಿ ಭಾಷಣ ಮಾಡುವ ಶೋಭಾ ಕರಂದ್ಲಾಜೆ ಈ ವಿಷಯದಲ್ಲಿ ತುಟಿ ಬಿಚ್ಚದಿರುವುದು ವಿಪರ್ಯಾಸವಾಗಿದೆ. ಕೃತ್ಯ ಎಸಗಿದ ಆರೋಪಿಗಳನ್ನು ತನಿಖೆ ನಡೆಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ನಸ್ರಿಯಾ ಬೆಳ್ಳಾರೆ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News