ಕೊಳ್ಳೇಗಾಲ: ಅಪಘಾತದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Update: 2019-07-03 17:54 GMT

ಕೊಳ್ಳೇಗಾಲ,ಜು.3: ಬೆಂಗಳೂರು-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಹೊಸ ಅಣಗಳ್ಳಿಯ ತಿರುವಿನಲ್ಲಿ ಬೈಕ್ ಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ನಿಡಘಟ್ಟ ಗ್ರಾಮದ ತಿಬ್ಬೇಗೌಡ (65) ಮೃತಪಟ್ಟವರು. ಇವರು ಮಳವಳ್ಳಿ ಪಟ್ಟಣದಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದರು. ಮತ್ತೊಬ್ಬ ಹಿಂಬದಿ ಸವಾರ ಬಸವರಾಜು ಎಂಬವರು ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರು ಮಾಜಿ ಪುರಸಭೆ ಸಾಯ್ಥಿ ಸಮಿತಿ ಅಧ್ಯಕ್ಷರಾಗಿದ್ದರು.

ಈ ಇಬ್ಬರು ನಿನ್ನೆ ಅಮಾವಾಸ್ಯೆ ಪ್ರಯುಕ್ತ ತಾಲೂಕಿನ ಕುರುಬನಕಟ್ಟೆ ಮಠಕ್ಕೆ ಬಂದು ಪೂಜೆ ಸಲ್ಲಿಸಿ ವಾಪಸ್ ಮಳವಳ್ಳಿಗೆ ತೆರಳುತ್ತಿದ್ದ ವೇಳೆ ಬೆಂಗಳೂರು  ಕೊಳ್ಳೇಗಾಲ ಮುಖ್ಯ ರಸ್ತೆ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ಹೊಸ ಅಣಗಳ್ಳಿಯ ತಿರುವಿನಲ್ಲಿ ಇವರಿದ್ದ ಬೈಕ್‍ಗೆ ಎದುರಿನಿಂದ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. 

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಇಬ್ಬರಿಗೂ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗದೆ ತಿಬ್ಬೇಗೌಡ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಕೊಳ್ಳೆಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News