ಹನೂರು: 1.60 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Update: 2019-07-03 18:16 GMT

ಹನೂರು, ಜು.3: ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರು ವಾಸಿಸುವ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಆರ್ಥಿಕ ಮತ್ತು ಸಾಮಾಜಿಕವಾಗಿ ತೀರಾ ಹಿಂದುಳಿದಿರುವ ಈ ಸಮುದಾಯವರನ್ನು ಅಭಿವೃದ್ದಿ ಮಾಡಲು ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಶಾಸಕ ನರೇಂದ್ರ ತಿಳಿಸಿದರು.

ಹನೂರು ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಲೆಮಾರಿ ಮತ್ತು ಅಲೆಮಾರಿ ಸಮುದಾಯದವರು ವಾಸಿಸುವ ವಿವಿಧ ಗ್ರಾಮಗಳಲ್ಲಿ ಸುಮಾರು 1.60 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿಗಳಿಗೆ ಶಿಲಾನ್ಯಾಸ ನೇರವೇರಿಸಿ ಮಾತನಾಡಿದ ಅವರು, ಹನೂರು ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದವರು ವಾಸಿಸುವ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಈ ಸಂಬಂಧ ಅನುದಾನ ಒದಗಿಸಿಕೂಡಿ ಎಂದು ಹಿಂದುಳಿದ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮನವಿ ಮಾಡಿದ್ದೆ. ಅದರಂತೆ ಅವರು ಅನುದಾನ ನೀಡಿದ್ದಾರೆ ಎಂದರು.

ಈ ಸಮುದಾಯವ ಏಳಿಗೆಗಾಗಿ ಸರಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಶ್ರೀನಿವಾಸ್, ಪುಟ್ಟಮ್ಮ, ವೆಂಕಟೇಶ್, ಮಹದೇವ್ ಮಾಜಿ ಗ್ರಾ.ಪಂ. ಸದಸ್ಯ ಮಲ್ಲಯ್ಯ ಸೇರಿದಂತೆ ಹಲವರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News