ಮಧ್ಯಂತರ ಚುನಾವಣೆ ಗ್ಯಾರಂಟಿ: ವಾಟಾಳ್ ನಾಗರಾಜ್

Update: 2019-07-04 13:33 GMT

ಹುಬ್ಬಳ್ಳಿ, ಜು.4: ಬಿಜೆಪಿಯವರ ನಡೆ ಸರಿಯಾಗಿಲ್ಲ. ಬಿಜೆಪಿಯವರು ಬಹಿರಂಗವಾಗಿ ವ್ಯಾಪಾರಕ್ಕಿಳಿದಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಗ್ಯಾರಂಟಿ ಬರುತ್ತದೆ ಎಂದು ಕನ್ನಡ ಚಳವಳಿಗಾರ ವಾಟಾಳ್ ನಾಗರಾಜ್ ಇಂದಿಲ್ಲಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಉತ್ತರ ಕರ್ನಾಟಕ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತಿಲ್ಲ. ನಂಜುಂಡಪ್ಪ ವರದಿಯನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಮಹದಾಯಿ ವಿಷಯದಲ್ಲಿ ಸರಕಾರ ಏನು ಮಾಡಿದೆ. ಜಿಂದಾಲ್ ಉಳಿಸಿಕೊಳ್ಳಲು ಒಬ್ಬ ಮಂತ್ರಿಯನ್ನು ನೇಮಕ ಮಾಡುತ್ತಾರೆ. ಆದರೆ ಮಹದಾಯಿ ವಿಷಯದಲ್ಲಿ ಓರ್ವ ಮಂತ್ರಿಯನ್ನು ನೇಮಕ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ಆ.12ಕ್ಕೆ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲು ತೀರ್ಮಾನಿಸಲಾಗಿದೆ. ಉತ್ತರ ಕರ್ನಾಟಕ ಕುಡಿಯುವ ನೀರು ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಲಾಗುತ್ತದೆ ಎಂದರು.

ಜನರಿಂದ ಆಯ್ಕೆಯಾದ ಶಾಸಕರು ಹಾದಿ ಬೀದಿಯಲ್ಲಿ ಹೋಗುವ ಎಲ್ಲರಿಗೂ ರಾಜೀನಾಮೆ ನೀಡಲು ಸಾಧ್ಯವಾಗಲ್ಲ. ಅದು ರಾಜ್ಯಪಾಲರಿಗೆ ರಾಜೀನಾಮೆ ನೀಡುವುದಲ್ಲ. ನೇರವಾಗಿ ವಿಧಾನಸಭಾಧ್ಯಕ್ಷರಾಗಿರುವ ರಮೇಶ್ ಕುಮಾರ್‌ರನ್ನು ಭೇಟಿ ಮಾಡಿ ರಾಜೀನಾಮೆ ನೀಡಬೇಕಿತ್ತು. ಶಾಸಕರು ಬ್ಲಾಕ್‌ಮೇಲ್ ತಂತ್ರ ಅನುಸರಿಸುತ್ತಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News