ಸಂತೆಕಟ್ಟೆ ಅಪಘಾತ: ಮೃತರ ಗುರುತು ಪತ್ತೆ

Update: 2019-07-04 16:09 GMT

ಉಡುಪಿ, ಜು.4: ಸಂತೆಕಟ್ಟೆ ಸಮೀಪದ ನಯಂಪಳ್ಳಿ ಮಡಿಮಲ್ಲಿಕಾರ್ಜುನ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.3ರಂದು ರಾತ್ರಿ 8 ಗಂಟೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಪರಶುರಾಮ ಡಕ್ಕಿ (35) ಎಂಬವರು ಮೃತಪಟ್ಟಿದ್ದಾರೆ.

ಸಂತೆಕಟ್ಟೆ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಬೈಕನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಪರಶುರಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ಬಳಿಕ ಚಾಲಕ ಲಾರಿಯನ್ನು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News