ಕನ್ನಡದಲ್ಲಿ ಸುಪ್ರೀಂ ತೀರ್ಪು: ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ಸಂದ ಗೌರವ- ಎಸ್.ಜಿ.ಸಿದ್ದರಾಮಯ್ಯ

Update: 2019-07-04 16:29 GMT

ಬೆಂಗಳೂರು, ಜು.4: ಕನ್ನಡ ಭಾಷೆಯಲ್ಲಿಯೂ ತೀರ್ಪುಗಳನ್ನು ಪ್ರಕಟಿಸುವ ಸರ್ವೋಚ್ಚ ನ್ಯಾಯಾಲಯದ ನಿರ್ಣಯ ನ್ಯಾಯದಾನದ ದೃಷ್ಟಿಯಿಂದಷ್ಟೇ ಅಲ್ಲ, ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಸಮರ್ಥವಾಗಿ ಪ್ರತಿಬಿಂಬಿಸುವುದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು

ಸರ್ವೋಚ್ಚ ನ್ಯಾಯಾಲಯದ ನಿರ್ಣಯ ಕರ್ನಾಟಕದ ಉಚ್ಚ ನ್ಯಾಯಾಲಯವೂ ಸೇರಿದಂತೆ ಎಲ್ಲ ಅಧೀನ ನ್ಯಾಯಾಲಯಗಳಿಗೂ ಮಾದರಿಯಾಗಲಿ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಆಶಿಸಿದ್ದಾರೆ.

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಬಳಕೆಗೆ ಅಭಿನಂದನೆ: ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ಸರಕಾರದ ನಿಲುವು ಅಭಿನಂದನೀಯ. ಇದು ಪ್ರಾದೇಶಿಕ ಭಾಷೆಗಳಿಗೆ ಸಂದ ಜಯವಾಗಿದೆ ಎಂದು ಕನ್ನಡ ಗೆಳೆಯರ ಬಳಗದ ಮುಖ್ಯಸ್ಥ ರಾ.ನಂ.ಚಂದ್ರಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಕನ್ನಡವೂ ಸೇರಿದಂತೆ 13 ಭಾಷೆಗಳಲ್ಲಿ (ಅಸ್ಸಾಂ, ಬೆಂಗಾಳಿ, ಕನ್ನಡ, ಕೊಂಕಣಿ, ಮಲಯಾಳಂ, ಮಣಿಪುರಿ, ಮರಾಠಿ, ಒಡಿಯಾ, ಪಂಜಾಬಿ, ತೆಲುಗು, ತಮಿಳು ಮತ್ತು ಉರ್ದು) ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಪ್ರಸಕ್ತ ಸಾಲಿನ ಆರ್ಥಿಕ ಸಮೀಕ್ಷೆ ಮಂಡನೆ ವೇಳೆ ಪ್ರಕಟಿಸಿರುವುದು ಪ್ರಜಾಪ್ರಭುತ್ವಕ್ಕೆ ಕೊಟ್ಟ ಗೌರವವಾಗಿದೆ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News