×
Ad

ಉಡುಪಿ: ಬಿಜೆಪಿ ಸದಸ್ಯತಾ ಅಭಿಯಾನಕ್ಕೆ ಚಾಲನೆ

Update: 2019-07-04 21:59 IST

ಉಡುಪಿ, ಜು. 4 : ಭಾರತೀಯ ಜನತಾ ಪಾರ್ಟಿಯ ಸಂಘಟನಾ ಪರ್ವದ ಭಾಗವಾಗಿ ಜು.6ರ ಶನಿವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬೆಳಗ್ಗೆ ಹೊಸದಿಲ್ಲಿಯಲ್ಲಿ ಸದಸ್ಯತನ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಅದೇ ದಿನ ಸಂಜೆ ಸಂಜೆ 4:30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಸದಸ್ಯತನ ಅಭಿಯಾನಕ್ಕೆ ಮಣಿಪಾಲದ ಬಸ್ ನಿಲ್ದಾಣದ (ಟೈಗರ್ ಸರ್ಕಲ್) ಬಳಿ ಚಾಲನೆ ನೀಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಭಾಗವಹಿಸಲಿದ್ದು, ಪಕ್ಷದ ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸುವಂತೆ ಹಾಗೂ ಸದಸ್ಯತನ ನೋಂದಣಿ ಮಾಡಿ ಸದಸ್ಯತನ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News