ಅಂಗನವಾಡಿಯಲ್ಲಿಯೆ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಒತ್ತಾಯ: ರಾಜ್ಯಾದ್ಯಂತ ಜು.5, 6ರಂದು ಅಹೋರಾತ್ರಿ ಧರಣಿ

Update: 2019-07-04 16:36 GMT

ಬೆಂಗಳೂರು, ಜು.4: ಅಂಗನವಾಡಿ ಕೇಂದ್ರಗಳಲ್ಲಿಯೆ ಎಲ್‌ಕೆಜಿ, ಯುಕೆಜಿ ಆರಂಭಿಸುವಂತೆ ಒತ್ತಾಯಿಸಲು ಜು.5, 6ರಂದು ರಾಜ್ಯಾದ್ಯಂತ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್(ಎಐಟಿಯುಸಿ) ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ತಿಳಿಸಿದ್ದಾರೆ. 

ಸರಕಾರಿ ಶಾಲೆಗಳಲ್ಲಿಯೆ ಎಲ್‌ಕೆಜಿ, ಯುಕೆಜಿ ಆರಂಭವಾಗುವುದರಿಂದ ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚುವ ಆತಂಕದ ಪರಿಸ್ಥಿತಿ ಉಂಟಾಗಲಿದೆ. ಇದರ ಜೊತೆಗೆ ಐಸಿಡಿಎಸ್ ಯೋಜನೆಯಲ್ಲಿ 3 ರಿಂದ 4 ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಬೀದಿ ಪಾಲಾಗುವ ಭೀತಿ ಎದುರಾಗಿದೆ.

ಶಿಶುಗಳ ಬೆಳವಣಿಗೆ ಅಂಗನವಾಡಿಗಳಿಂದ ಮಾತ್ರ ಸಾಧ್ಯ. ಇದಕ್ಕಾಗಿಯೆ ದಶಕಗಳಿಂದ ಕ್ರಮಬದ್ಧವಾದ ಕಾರ್ಯಕ್ರಮಗಳು ಹಾಗೂ ಅಂಗನವಾಡಿ ಶಿಕ್ಷಕರಿಗೆ ಸೂಕ್ತ ತರಬೇತಿಯನ್ನು ನೀಡಲಾಗಿದೆ. ಹೀಗಾಗಿ ಎಲ್‌ಕೆಜಿ, ಯುಕೆಜಿಗಳನ್ನು ಅಂಗನವಾಡಿಗಳಲ್ಲಿ ನಡೆಸುವಂತೆ ಸರಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ ಜು.5ರಂದು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ದರಣಿ ನಡೆಸಲಾಗುವುದು ಎಂದು ಅವರು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News