ಬಗಂಬಿಲ: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ; ಆರೋಪಿ ನ್ಯಾಯಾಲಯಕ್ಕೆ ಹಾಜರು
Update: 2019-07-04 22:30 IST
ಉಳ್ಳಾಲ: ದೇರಳಕಟ್ಟೆಯ ಬಗಂಬಿಲ ಸಮೀಪ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಶಾಂತ್ ನನ್ನು ಗುರುವಾರ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.
ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಗೆ ಶಕ್ತಿನಗರ ರಾಮಕೃಷ್ಣ ಮಿಷನ್ ಕಂಪೌಂಡ್ ನಿವಾಸಿ, ಡ್ಯಾನ್ಸ್ ಮಾಸ್ಟರ್ ಆಗಿದ್ದ ಸುಶಾಂತ್ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಿದ್ದ. ಬಳಿಕ ಚೂರಿಯಿಂದ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿ ಹಾಗೂ ಚಿಂತಾಜನಕ ಸ್ಥಿತಿಯಲ್ಲಿದ್ದ ಸುಶಾಂತ್ ನನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸುಶಾಂತ್ ಸಂಪೂರ್ಣ ಚೇತರಿಸಿಕೊಂಡಿದ್ದು, ವಾರದ ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.