ಜು.6: ಮುರುಡೇಶ್ವರದಲ್ಲಿ ಜಿಲ್ಲಾಮಟ್ಟದ ಪತ್ರಿಕಾ ದಿನಾಚರಣೆ

Update: 2019-07-04 17:07 GMT

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಜು.6ರಂದು ಬೆಳಿಗ್ಗೆ 10 ಗಂಟೆಗೆ ಮುರ್ಡೇಶ್ವರದ ಆರ್.ಎನ್.ಎಸ್. ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ, ಸನ್ಮಾನ ಕಾರ್ಯಕ್ರಮ ವನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಅಧ್ಯಕ್ಷ ರಾಧಾಕೃಷ್ಣ ಭಟ್ಟ, ಪ್ರಧಾನ ಕಾರ್ಯದರ್ಶಿ ನರಸಿಂಹ ಅಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕಾರ್ಯಕ್ರಮದಲ್ಲಿ ಪ್ರತಿ ವರ್ಷವೂ ಕೊಡಮಾಡುವ ಪ್ರತಿಷ್ಟಿತ ಕೆ. ಶ್ಯಾಮರಾವ್ ಶಾಮ್‍ರಾವ್ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಜಿ. ಸುಬ್ರಾಯ ಭಟ್ ಬಕ್ಕಳ ಅವರಿಗೆ, ದಿವಂಗತ ಜಿ.ಎಸ್.ಹೆಗಡೆ ಅಜ್ಜೀಬಳ ಅವರ ಸ್ಮರಣಾರ್ಥ ನೀಡುವ ಅಜ್ಜೀಬಳ ಪ್ರಶಸ್ತಿಯನ್ನು ಯಲ್ಲಾಪುರದ ಪತ್ರಕರ್ತ ನರಸಿಂಹ ಸಾತೊಡ್ಡಿ ಅವರಿಗೆ ಪ್ರದಾನ ಮಾಡಲಾಗುವುದು. ಮುರ್ಡೇಶ್ವರದ ಶಿಕ್ಷಣ ತಜ್ಞ ಎಂ. ವಿ. ಹೆಗಡೆ ಅವರನ್ನು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಗುವುದು ಎಂದೂ ತಿಳಿಸಿದ್ದು ಪತ್ರಿಕಾ ವಿತರಕರಾದ ಆನಂದ ಭಟ್ಟ ಮತ್ತು ಮಧು ಕಾಯ್ಕಣಿ ಅವರನ್ನು ಗೌರವಿಸಲಾಗುವುದು ಎಂದೂ ತಿಳಿಸಿದ್ದಾರೆ. 

ಕಾರ್ಯಕ್ರಮವನ್ನು ಶಾಸಕ ಸುನಿಲ್ ನಾಯ್ಕ ಉದ್ಘಾಟಿಸುವರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಧಾಕೃಷ್ಣ ಭಟ್ಟ ಅಧ್ಯಕ್ಷತೆ ವಹಿಸುವರು. ಸುಮುಖಟಿ.ವಿ., ಪ್ರಧಾನ ಸಂಪಾದಕ ಜಿ. ಸುಬ್ರಾಯ ಭಟ್ ಬಕ್ಕಳ ಇವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು ಕೆ. ಶ್ಯಾಮರಾವ್ ಪ್ರಶಸ್ತಿ ಪ್ರದಾನ ಮಾಡುವರು. ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನರಸಿಂಹ ಸಾತೋಡ್ಡಿ ಅವರಿಗೆ ಅಜ್ಜೀಬಳ ಪುರಸ್ಕಾರವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಪ್ರದಾನ ಮಾಡುವರು. 

ವಿಜಯ ಕರ್ನಾಟಕ  ಸಂಪಾದಕರಾದ ಹರಿಪ್ರಕಾಶ ಕೋಣೆಮನೆ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಉತ್ತರ ಕನ್ನಡ ಜಿಲ್ಲಾಧಿಕಾರಿ  ಡಾ. ಹರೀಶ್‍ಕುಮಾರ್ ಕೆ., ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಹ್ಯೂಮನ್ ವೆಲ್‍ಫೇರ್ ಅಸೋಶಿಯೇಶನ್ ಅಧ್ಯಕ್ಷ  ಡಾ. ಅಮೀನುದ್ದೀನ್ ಉಪಸ್ಥಿತರಿರುವರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News