ಭಾರೀ ಮಳೆ ಹಿನ್ನೆಲೆ: ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಣೆ

Update: 2019-07-05 15:06 GMT

ಚಿಕ್ಕಮಗಳೂರು, ಜು.5: ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (06-07-2019) ರಜೆ ಘೋಷಣೆ ಮಾಡಲಾಗಿದೆ.

ಮೂಡಿಗೆರೆ ಸುತ್ತಮುತ್ತ ಪ್ರದೇಶಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಹೇಮಾವತಿ ನದಿ ಭರ್ತಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News