‘ಕಾಯಕವೇ ಕೈಲಾಸ’ ಶೈಲಿಯ ಬಜೆಟ್: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

Update: 2019-07-05 15:44 GMT

ಬೆಂಗಳೂರು, ಜು.5: ಬಸವಣ್ಣನವರ ಕಾಯಕವೇ ಕೈಲಾಸ ಎಂಬ ನುಡಿಯ ಮೇಲೆ ಕೌಶಲಾಭಿವೃದ್ಧಿಗೆ ಹೆಚ್ಚಿನ ಮಹತ್ವವನ್ನು ಒದಗಿಸಲಾಗಿದೆ. ಕರ್ನಾಟಕದ ಸಂಸ್ಕೃತಿ ಪ್ರಧಾನಮಂತ್ರಿ ನರೇಂದ್ರಮೋದಿ ಸರಕಾರದ 2019-20ನೇ ಸಾಲಿನ ಬಜೆಟ್‌ನಲ್ಲಿ ಮೊಳಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಈ ಬಜೆಟ್‌ನಲ್ಲಿ ಆರ್ಥಿಕ ಶಿಸ್ತನ್ನು ಕಾಯ್ದುಕೊಂಡಿದ್ದು, ಕಳೆದ ಎರಡು ವರ್ಷಗಳಲ್ಲಿ 2786 ಲಕ್ಷ ಕೋಟಿ ರೂ.ಆದಾಯ ಸಂಗ್ರಹ ಹೆಚ್ಚಿಸಿಕೊಂಡಿದೆ. ಕಳೆದ ದಿನಗಳಿಗಿಂತ ಆರ್ಥಿಕ ಶಿಸ್ತು 3.3 ಇಳಿದಿದೆ. ದೇಶದ ಕಟ್ಟಕಡೆಯ ನಾಗರಿಕನಿಗೂ ಸರಕಾರಿ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ ಬಜೆಟ್ ಅನ್ನು ನಾಗರಿಕರಿಗೆ ಸಮರ್ಪಿಸಿದೆ ಎಂದು ಅವರು ಹೇಳಿದ್ದಾರೆ.

ದೂರದರ್ಶನ ಸಹಭಾಗಿತ್ವದಲ್ಲಿ ನೂತನ ವಾಹಿನಿಯನ್ನು ಪ್ರಾರಂಭಿಸಲಾಗುವುದು. ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದವರಿಗೆ ಈ ಯೋಜನೆಗಳ ಮೂಲಕ ಹೆಚ್ಚಿನ ಉದ್ಯೋಗವಕಾಶ ಲಭ್ಯ ಎಂದು ಸದಾನಂದಗೌಡ ತಿಳಿಸಿದ್ದಾರೆ.

60 ವರ್ಷ ಮೇಲ್ಪಟ್ಟವರಿಗೆ 3000 ಮಾಸಾಸನ ಸೌಲಭ್ಯವನ್ನು ಒದಗಿಸಲಾಗಿದೆ. ವಾರ್ಷಿಕ ವಹಿವಾಟು 1.5 ಕೋಟಿ ಕಡಿಮೆ ಇರುವ 3 ಕೋಟಿ ಸಣ್ಣ ವ್ಯಾಪಾರಸ್ತರಿಗೆ ಮಾಸಾಸನ ಸೌಲಭ್ಯವನ್ನು ಪ್ರಧಾನಮಂತ್ರಿ ಕರಮ್ ಯೋಗಿ ಮನ್‌ಧನ್ ಯೋಜನೆಯಡಿ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಗೃಹ ನಿರ್ಮಾಣ ಮತ್ತು ಮೂಲ ಸೌಲಭ್ಯ ಅಭಿವೃದ್ಧಿಗೆ 100 ಲಕ್ಷ ಕೋಟಿ ಅನುದಾನವನ್ನು ಮುಂದಿನ ಐದು ವರ್ಷಕ್ಕೆ ಮೀಸಲಿರಿಸಲಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 17 ಪ್ರವಾಸಿ ಕೇಂದ್ರಗಳನ್ನು ವಿಶ್ವದರ್ಜೆ ಮಟ್ಟಕ್ಕೆ ಏರಿಸಲಾಗಿದೆ ಎಂದು ಸದಾನಂದಗೌಡ ಪ್ರಕಟಣೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News