ರೈತ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2019-07-05 18:26 GMT

ಬೆಂಗಳೂರು, ಜು.5: ಬೆಂಗಳೂರು ಕೃಷಿ ವಿಶ್ವದ್ಯಾನಿಲಯವು ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ವಿವಿಧ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳಾ ಪ್ರಶಸ್ತಿ, ದಿವಂಗತ ಸಿ.ಭೈರೇಗೌಡ ರಾಜ್ಯ ಮಟ್ಟದ ರೈತ ಮತ್ತು ರೈತ ಮಹಿಳಾ ಪ್ರಶಸ್ತಿ, ಡಾ.ಎಂ.ಎಚ್.ಮರೀಗೌಡ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ದ್ವಾರಕೀನಾಥ್ ಅತ್ಯುತ್ತಮ ರೈತ, ರೈತ ಮಹಿಳಾ ಪ್ರಶಸ್ತಿ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ ಹಾಗೂ ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ, ರೈತ ಮಹಿಳಾ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಕೃಷಿವಿಶ್ವವಿದ್ಯಾಲಯವು 2019ರ ಅಕ್ಟೋಬರ್‌ನಲ್ಲಿ ಆಯೋಜಿಸಲಿರುವ ಕೃಷಿ ಮೇಳದಲ್ಲಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 080- 23418883 ಅನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News