ಮಾಜಿ ಸಚಿವ ಕಾಗೋಡು ತಿಮ್ಮಪ್ಪರ ಆರೋಗ್ಯ ಸ್ಥಿರ

Update: 2019-07-06 05:29 GMT

ಶಿವಮೊಗ್ಗ, ಜು.6: ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶನಿವಾರ ಅವರನ್ನೆ ಬೆಂಗಳೂರಿಗೆ ಕರೆ ತರಲಾಗುವುದು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಿಮ್ಮಪ್ಪರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಉಸಿರಾಟ ಮತ್ತು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿದ್ದಾರೆ. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು  ಬೆಂಗಳೂರಿಗೆ ಕರೆ ತರಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News