ಲಿಂಗನಮಕ್ಕಿಯಿಂದ ನೀರು ತರಲು ಮಾರ್ಗ ಪರಿಶೀಲನೆ: ಡಾ.ಜಿ.ಪರಮೇಶ್ವರ್

Update: 2019-07-06 13:31 GMT

ಬೆಂಗಳೂರು, ಜು. 6: ಬೆಂಗಳೂರು ನಗರಕ್ಕೆ ಲಿಂಗನಮಕ್ಕಿಯಿಂದ ನೀರು ತರುವ ಸಂಬಂಧ ಕ್ರಿಯಾ ಯೋಜನೆ ವರದಿ(ಡಿಪಿಆರ್) ಸಿದ್ಧಪಡಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕುಡಿಯುವ ನೀರು ಸಿಗುವುದೆ ಕಷ್ಟವಾಗಿದೆ. ಹೀಗಾಗಿ ಲಿಂಗನಮಕ್ಕಿಯಿಂದ ನೀರು ತರಲು ಉದ್ದೇಶಿಸಲಾಗಿದೆ. ಅಲ್ಲದೆ, ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯದಿಂದ ನೀರು ತರಲು ಮಾರ್ಗ ಗುರುತಿಸಲಾಗಿದೆ ಎಂದರು.

ಕೃಷ್ಣರಾಜ ಸಾಗರ(ಕೆಆರ್‌ಎಸ್)ದಲ್ಲಿ ಕೇವಲ 80 ಅಡಿಗಳಷ್ಟು ನೀರಿದ್ದು, ಒಂದು ತಿಂಗಳ ಅವಧಿಗೆ ಮಾತ್ರ ಬೆಂಗಳೂರಿಗೆ ನೀರು ಹರಿಸಲು ಸಾಧ್ಯ. ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೆ, ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಾಗುತ್ತಿಲ್ಲ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News